Loading Bible Translation
First-time download in progress. This may take a few seconds…
Kannada Holy Bible Wordproject Bible
32 verses
1ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
3ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು.
4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
5ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
7ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
8ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
9ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
10ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
11ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
12ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು.
13ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
14ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
16ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
17ಹಿವ್ವಿಯನೂ ಅರ್ಕಿಯನೂ ಸೀನಿಯನೂ
18ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
20ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
23ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ.
24ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
25ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
26ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ
27ಹದೋರಾಮನೂ ಊಜಾಲನೂ ದಿಕ್ಲಾನನೂ
28ಓಬಾಲನೂ ಅಬೀಮಯೇಲನೂ ಶೆಬನೂ
29ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
30ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
31ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.
32ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.