Loading Bible Translation
First-time download in progress. This may take a few seconds…
Kannada Holy Bible Wordproject Bible
5 verses
1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
2ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು.
3ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.
4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.
5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.