Loading Bible Translation
First-time download in progress. This may take a few seconds…
Kannada Holy Bible Wordproject Bible
10 verses
1ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು,
2ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
3ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು.
4ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
5ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
7ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
8ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
9ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.
10ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.