Loading Bible Translation
First-time download in progress. This may take a few seconds…
Kannada Holy Bible Wordproject Bible
28 verses
1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
5ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
6ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
8ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
9ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
12ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
14ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
15ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
17ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
21ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
23ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
24ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
25ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
26ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
27ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.
28ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.