Loading Bible Translation
First-time download in progress. This may take a few seconds…
Kannada Holy Bible Wordproject Bible
6 verses
1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
2ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವ���ಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
3ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
4ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
5ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನು
6ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.