Loading Bible Translation
First-time download in progress. This may take a few seconds…
Kannada Holy Bible Wordproject Bible
6 verses
1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನ���ನಗೆ ಒಳ್ಳೇಯದಾಗುವದು.
3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
4ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
5ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.
6ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.