Loading Bible Translation
First-time download in progress. This may take a few seconds…
Kannada Holy Bible Wordproject Bible
10 verses
1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನ���್ನು ಮರೆಮಾಡು.
3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
4ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
6ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
7ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;
10ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.