Loading Bible Translation
First-time download in progress. This may take a few seconds…
Kannada Holy Bible Wordproject Bible
20 verses
1ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
2ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
3ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
5ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
7ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
12ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
13ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
14ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
15ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
16ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.
20ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.