Loading Bible Translation
First-time download in progress. This may take a few seconds…
Kannada Holy Bible Wordproject Bible
18 verses
1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
2ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
3ನಿನ್�� ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
4ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
5ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
6ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
7ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
8ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
9ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
11ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
12ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
13ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
14ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
16ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
17ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.
18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.